ಕರ್ನಾಟಕ ಜ್ಯುವೆಲರ್ಸ್ ಅಸೋಸಿಯೇಷನ್‌ ಸಭೆ ಯಶಸ್ವಿ

WhatsApp
Telegram
Facebook
Twitter
LinkedIn

ಬೆಂಗಳೂರು: ಬಸವನಗುಡಿಯ ಡಿವಿಜಿ ರಸ್ತೆಯಲ್ಲಿರುವ ನಮ್ಮ ಶ್ರೀ ಸಾಯಿ ಪಾರ್ಟಿ ಹಾಲ್ ನಲ್ಲಿ ಕರ್ನಾಟಕ ಜ್ಯುವೆಲರ್ಸ್ ಅಸೋಸಿಯೇಷನ್‌ನ ಮಹತ್ವದ ಸಭೆ ಯಶಸ್ವಿಯಾಗಿ ಜರುಗಿತು.

ಅಸೋಸಿಯೇಷನ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಟಿ.ಎ. ಶರವಣ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಆಭರಣ ಉದ್ಯಮದ ಭವಿಷ್ಯ ಮತ್ತು ಸವಾಲುಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು.​ಈ ವೇಳೆ ಉದ್ಯಮದ ಏಳಿಗೆಗಾಗಿ ದಶಕಗಳಿಂದ ಶ್ರಮಿಸಿದ ಹಿರಿಯ ಪದಾಧಿಕಾರಿಗಳನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿ ಟಿ.ಎ. ಶರವಣ, ಹಿರಿಯರ ಮಾರ್ಗದರ್ಶನ ಹಾಗೂ ಅನುಭವ ನಮ್ಮ ಉದ್ಯಮಕ್ಕೆ ಭದ್ರ ಬುನಾದಿಯಾಗಿದೆ. ಅವರ ನಿಸ್ವಾರ್ಥ ಸೇವೆ ಇಂದಿನ ಪೀಳಿಗೆಗೆ ಮಾದರಿ ಎಂದು ಶ್ಲಾಘಿಸಿದರು.

ಉದ್ಯಮದ ಸಮಸ್ಯೆಗಳ ಕುರಿತು ಸಮಾಲೋಚನೆ:

ಆಭರಣ ಉದ್ಯಮವು ಪ್ರಸ್ತುತ ಎದುರಿಸುತ್ತಿರುವ ತೆರಿಗೆ ನೀತಿಗಳು, ಮಾರುಕಟ್ಟೆಯ ಏರಿಳಿತ ಹಾಗೂ ಭದ್ರತಾ ವಿಷಯಗಳ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. ಈ ಸಮಸ್ಯೆಗಳಿಗೆ  ಸಂಘಟಿತವಾಗಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಸರ್ಕಾರದ ಮಟ್ಟದಲ್ಲಿ ಆಭರಣೋದ್ಯಮಿಗಳ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ಟಿ.ಎ. ಶರವಣ ಇದೇ ವೇಳೆ ಭರವಸೆ ನೀಡಿದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon