ಡಿಸೆಂಬರ್ 4 ರಂದು ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಮ್ಮೇಳನ: ರಾಜ್ಯಾಧ್ಯಕ್ಷೆ ರೋಶನಿ ಗೌಡ

WhatsApp
Telegram
Facebook
Twitter
LinkedIn

ಬೆಂಗಳೂರು: ರಾಜ್ಯ ಸರ್ಕಾರ ಮಹಿಳಾ ನೌಕರರಿಗೆ ಋತುಚಕ್ರ ರಜೆ ಘೋಷಿಸಿರುವುದರಿಂದ ಡಿ.4ರ ಬೆಳಗ್ಗೆ 10 ಗಂಟೆಗೆ ಸರ್ಕಾರಕ್ಕೆ ಅಭಿನಂದನಾ ಸಮಾರಂಭ ಮತ್ತು ಮಹಿಳಾ ನೌಕರರ ಸಮ್ಮೇಳನವನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ರಾಜ್ಯಾಧ್ಯಕ್ಷೆ ರೋಶನಿ ಗೌಡ ತಿಳಿಸಿದರು.

ಮಂಗಳವಾರ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ಮಹಿಳಾ ನೌಕರರ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದಾರೆ. ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಎಸ್.ಹೊರಟ್ಟಿ ಉಪಸ್ಥಿತಲಿರಲಿದ್ದಾರೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಎಚ್.ಕೆ.ಪಾಟೀಲ್, ದಿನೇಶ್ ಗುಂಡೂರಾವ್, ಚಲುವರಾಯಸ್ವಾಮಿ, ಸಂತೋಷ್ ಲಾಡ್, ಲಕ್ಷ್ಮಿ ಹೆಬ್ಬಾಳ್ಕರ್, ಬಿ.ಝಡ್.ಜಮೀರ್ ಅಹಮ್ಮದ್‌ಖಾನ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ, ಶಾಸಕರಾದ ರಿಝ್ವಾನ್ ಅರ್ಷದ್, ಎ.ಎಸ್.ಪೊನ್ನಣ್ಣ, ಅಲ್ಲಮಪ್ರಭು ಪಾಟೀಲ, ಸಿ.ಪುಟ್ಟರಂಗಶೆಟ್ಟಿ ಸೇರಿದಂತೆ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon