ಡಾಲಿ ಧನಂಜಯ ನಿರ್ಮಾಣದ ಜೆರಾಕ್ಸ್ ವೆಬ್ ಸಿರೀಸ್ ಗೆ ಪಾಯಲ್ ಚೆಂಗಪ್ಪ ಎಂಟ್ರಿ

WhatsApp
Telegram
Facebook
Twitter
LinkedIn

ಬೆಂಗಳೂರು: ಜೀ5 ಕನ್ನಡದ ಬಹು ನಿರೀಕ್ಷಿತ ವೆಬ್ ಸರಣಿ ಜೆರಾಕ್ಸ್ಗೆ  ನಟಿ ಪಾಯಲ್ ಚೆಂಗಪ್ಪ ಸೇರ್ಪಡೆಯಾಗಿದ್ದಾರೆ.

ಕನ್ನಡ ಮಣ್ಣಿನ ಸೊಗಡನ್ನು ಪ್ರತಿಬಿಂಬಿಸುವ ಕಥೆಗಳಿಗೆ ಈ ಒಟಿಟಿ ವೇದಿಕೆ ಸೃಷ್ಟಿಸಿದೆ. ಈಗಾಗಲೇ ಹಲವು ವೆಬ್ ಸರಣಿಗಳನ್ನು ಪ್ರೇಕ್ಷಕರಿಗೆ ನೀಡಿರುವ ಜೀ5 ಈಗ ‘ಜೆರಾಕ್ಸ್’ ಮೂಲಕ ಪ್ರೇಕ್ಷಕರನ್ನು ತನ್ನತ್ತ ಸೆಳೆಯುತ್ತಿದೆ.

ನಟನಾಗಿ ಹಾಗೂ ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಡಾಲಿ ಧನಂಜಯ್ ತಮ್ಮ ಡಾಲಿ ಪಿಕ್ಚರ್ಸ್ ಬ್ಯಾನರ್ ನಡಿ ಜೆರಾಕ್ಸ್ ವೆಬ್ ಸರಣಿಯನ್ನು ನಿರ್ಮಿಸುತ್ತಿದ್ದಾರೆ. ಈ ಸಿರೀಸ್ ಅನ್ನು ಬ್ಲಿಂಕ್ ಚಿತ್ರದ ಖ್ಯಾತಿಯ ನಿರ್ದೇಶಕ ಶ್ರೀನಿಧಿ ಬೆಂಗಳೂರು ನಿರ್ದೇಶಿಸಲಿದ್ದಾರೆ. ಜೆರಾಕ್ಸ್ ವೆಬ್ ಸರಣಿಯ ಮುಖ್ಯಭೂಮಿಕೆಯಲ್ಲಿ ನಾಗಭೂಷಣ್ ನಟಿಸಲಿದ್ದು, ಇದೀಗ ಪಾಯಲ್ ಚೆಂಗಪ್ಪ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಅಮೃತಾಂಜನ್,‌ ಬ್ಯಾಡ್‌ ಗರ್ಲ್ಸ್ ಮುಂತಾದವುಗಳ ಮೂಲಕ ತಮ್ಮ ನಟನಾ ಕೌಶಲ್ಯ ಪ್ರದರ್ಶಿಸಿರುವ ಪಾಯಲ್ ಚೆಂಗಪ್ಪ ಈಗ ಜೆರಾಕ್ಸ್ ನಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದ ಸೆನ್ಸೇಷನ್ ಎಂದು ಹಾಗೂ ತಮ್ಮ ಹಾಸ್ಯ ಪ್ರಜ್ಞೆಗೆ ಪ್ರಸಿದ್ಧಿ ಪಡೆದಿರುವ ಪಾಯಲ್,‌ ಇದೀಗ ಜೆರಾಕ್ಸ್ ಮೂಲಕ ಮತ್ತೊಮ್ಮೆ ಪ್ರೇಕ್ಷಕರನ್ನು ನಕ್ಕು ನಗಿಸಲು ಸಿದ್ಧವಾಗಿದ್ದಾರೆ.

 

 

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon