ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ ಸಂಬಂಧ ಆಕ್ಷೇಪಣೆ ಸಲ್ಲಿಸಿ: ರಾಜೇಂದ್ರ ಚೋಳನ್

WhatsApp
Telegram
Facebook
Twitter
LinkedIn

ಬೆಂಗಳೂರು: ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಸಂಬಂಧಿಸಿದಂತೆ ಅಹವಾಲು ಮತ್ತು ಆಕ್ಷೇಪಣೆ ಸಲ್ಲಿಸಲು ಸಂಬಂದಪಟ್ಟ ಕ್ಷೇತ್ರಗಳ ವ್ಯಾಪ್ತಿಗೊಳಪಡುವ ಮತದಾರರ ನೋಂದಣಾಧಿಕಾರಿ ಹಾಗೂ ಕಂದಾಯ ಅಧಿಕಾರಿಗಳ ಕಛೇರಿಗೆ ಮನವಿ ಸಲ್ಲಿಸಬೇಕು ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿ (ಕೇಂದ್ರ) ಹಾಗೂ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ ರಾಜೇಂದ್ರ ಚೋಳನ್‌ ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.

ಶನಿವಾರ ಕೇಂದ್ರ ನಗರ ಪಾಲಿಕೆಯ ಎಂ.ಜಿ. ರಸ್ತೆಯಲ್ಲಿನ ಆಯುಕ್ತರ ಕಛೇರಿ ಸಭಾಂಗಣದಲ್ಲಿ ಸಾರ್ವತ್ರಿಕ ಚುನಾವಣೆ ವಿಷಯವಾಗಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆ-2026 ಕ್ಕೆ ಸಂಬಂಧಿಸಿದಂತೆ ಜನವರಿ 19 ರಂದು ಕರಡು ಮತದಾರರ ಪಟ್ಟಿಯನ್ನು ಈಗಾಗಲೇ ಪ್ರಚುರ ಪಡಿಸಲಾಗಿದೆ. ಸದ್ಯ ಪರಿಷ್ಕೃತ ಕರಡು ಮತದಾರರ ಪಟ್ಟಿಯ ಪರಿಷ್ಕರಣೆ ಹಂತದಲ್ಲಿದ್ದು, ಬೆಂಗಳೂರು ಪೂರ್ವ ನಗರ ಪಾಲಿಕೆಗೆ ಸಂಬಂಧಿಸಿದ ಪಟ್ಟಿಯನ್ನು ಮಾರ್ಚ್ 9 ರಂದು ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಪರಿಷ್ಕೃತ ಕರಡು ಮತದಾರರ ಪಟ್ಟಿಯಲ್ಲಿ ಏನಾದರೂ ಲೋಪದೋಷಗಳಿದ್ದರೆ ಮಾರ್ಚ್ 10 ರಿಂದ 16 ರ ಅವಧಿಯಲ್ಲಿ ಅಹವಾಲು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದನ್ನು ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಮತದಾರರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಪರಿಷ್ಕೃತ ಕರಡು ಮತದಾರರ ಪಟ್ಟಿಯಲ್ಲಿ ಒಂದೇ ಕುಟುಂಬದ ಮತದಾರರು ಬೇರೆ ಮತಗಟ್ಟೆಗಳಿಗೆ / ಬೇರೆ ವಾರ್ಡ ಗಳಿಗೆ ವಿಭಜನೆಯಾಗಿದ್ದಲ್ಲಿ, ಮತದಾರರ ವಿವರಗಳು ಅದಲು-ಬದಲು ಆಗಿರುವುದು ಹಾಗೂ ಮತದಾರರು ಭೌಗೋಳಿಕವಾಗಿ ಒಂದೇ ವಾರ್ಡ್ ನಲ್ಲಿ ವಾಸವಾಗಿದ್ದು, ಮತ್ತೊಂದು ವಾರ್ಡ್‌ ನ ಮತಗಟ್ಟೆಯಲ್ಲಿ ಸೇರ್ಪಡೆಗೊಂಡಿರುವ ಸಂಬಂಧ ಲೋಪದೋಷಗಳಿದ್ದಲ್ಲಿ ಅಹವಾಲು ಆಕ್ಷೇಪಣೆಗಳನ್ನು ವಿಧಾನಸಭಾ ಕ್ಷೇತ್ರಗಳಾದ 161- ಸಿ.ವಿ.ರಾಮನ್ ನಗರ, 162- ಶಿವಾಜಿನಗರ, 163-ಶಾಂತಿನಗರ, 164- ಗಾಂಧಿನಗರ, 168- ಚಾಮರಾಜಪೇಟೆ ಹಾಗೂ 169- ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳ ಹೊಸ 63 ವಾರ್ಡ್ ಗಳ ಮತದಾರರ ನೊಂದಣಾಧಿಕಾರಿಗಳಿಗೆ ಅಥವಾ ಸಹಾಯಕ ಮತದಾರರ ನೊಂದಣಾಧಿಕಾರಿಗಳಿಗೆ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಅಭಿವೃದ್ಧಿ ಅಪರ ಆಯುಕ್ತ ದಲ್ಜಿತ್ ಕುಮಾರ್, ಕಂದಾಯ ಅಪರ ಆಯುಕ್ತ ರಂಗನಾಥ್, ಜಂಟಿ ಆಯುಕ್ತ ಹೇಮಂತ್ ಶರಣ್, ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಉಪ ಆಯುಕ್ತರು, ಕಂದಾಯ ಅಧಿಕಾರಿಗಳು ಹಾಜರಿದ್ದರು.

 

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon