ಬೆಳಗಾವಿ: ಕರ್ನಾಟಕ ರಾಜ್ಯ ಸ ಅಭಿವೃದ್ಧಿ ಸಂಘದಿಂದ ನಾಳೆ ಬೆಳಗ್ಗೆ 10 ಗಂಟೆಗೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನೆಹರು ನಗರದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಭಾನುವಾರ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸತೀಶ್ ಜಾರಕಿಹೊಳಿ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗವಹಿಸಲಿದ್ದಾರೆ. ಮೊತ್ತಬ್ಬ ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತಿಗಳು ಹಾಗೂ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಯ ರು ಪಾಟೀಲ್ ಉಪಸ್ಥಿತರಿರಲಿದ್ದಾರೆ.
ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅಸಿಫ್ ಶೇಠ, ಕರ್ನಾಟಕ ರಾಜ್ಯ ಸ ಅಭಿವೃದ್ಧಿ ಸಂಘದ ಅಧ್ಯಕ್ಷ ಸುಭಾಷ ಬಿ ನೇತ್ರೇಕರ ಮತ್ತು ಸಂಚಾಲಕರಾದ ಭೀಮರಾವ ಯ ಪವಾರ 2024 25 ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಿದ್ದಾರೆ.















