ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬದಲಾವಣೆ ಮಾಡುವ ಮೂಲಕ ಪ್ರಮುಖ ಸಮಸ್ಯೆಗಳ ನಿವಾರಣೆ: ಪ್ರಿಯಾಂಕ್‌ ಖರ್ಗೆ

WhatsApp
Telegram
Facebook
Twitter
LinkedIn

ಬೆಂಗಳೂರು: ಇ-ಸ್ವತ್ತು 2.0 ತಂತ್ರಾಂಶದಡಿ ಸಾರ್ವಜನಿಕರಿಂದ ರಾಜ್ಯದಾದ್ಯಂತ ಈವರೆಗೂ 1,52,863 ಅರ್ಜಿಗಳು ಸ್ವೀಕೃತಗೊಂಡಿದ್ದು, 1,33,803 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ತಂತ್ರಾಂಶದಲ್ಲಿ ಬದಲಾವಣೆ ಮಾಡುವ ಮೂಲಕ ಪ್ರಮುಖ ಸಮಸ್ಯೆಗಳ ನಿವಾರಣೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ಸೋಮವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಇ-ಸ್ವತ್ತು ತಂತ್ರಾಂಶದ ಕಾರ್ಯನಿರ್ವಹಣೆ ಹಾಗೂ ಪ್ರಗತಿಯನ್ನು ಪರಿಶೀಲಿಸಿದರು. ಅಲ್ಲದೇ, ಹೊಸ ನಮೂನೆ 11ಬಿ ಗೆ ಸಂಬಂಧಿಸಿದಂತೆ ಈವರೆಗೆ 76,093 ಅರ್ಜಿಗಳು ಸ್ವೀಕೃತವಾಗಿವೆ. ಈ ಅರ್ಜಿಗಳು ವಿವಿಧ ಹಂತಗಳಲ್ಲಿ ಅನುಮೋದನೆಗೆ ಬಾಕಿ ಉಳಿದಿದ್ದು, ಈ ಅರ್ಜಿಗಳನ್ನು ತ್ವರಿತ ಗತಿಯಲ್ಲಿ ವಿಲೇವಾರಿ ಮಾಡುವಲ್ಲಿ ಕ್ರಮವಹಿಸಲಾಗುತ್ತಿದೆ ಎಂದು ಹೇಳಿದರು.

ಇ-ಸ್ವತ್ತು 2.0 ತಂತ್ರಾಂಶದ ಸಿಟಿಜನ್‌ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಸಲ್ಲಿಸುವಲ್ಲಿ ಮತ್ತು ಬಳಕೆದಾರರು ಅರ್ಜಿಗಳನ್ನು ಅನುಮೋದನೆ ಮಾಡುವಂತಹ ಸಂದರ್ಭದಲ್ಲಿ ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಲಹೆಗಳು ಬರುತ್ತಿವೆ. ಈ ಸಂಬಂಧ ತಂತ್ರಾಂಶದಲ್ಲಿ ಬದಲಾವಣೆ ಮಾಡಿ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ಮಾಹಿತಿ ನೀಡಿದರು.

ತಂತ್ರಾಂಶದಲ್ಲಿ ನಮೂನೆ–11ಬಿ ಖಾತೆಗಳನ್ನು ನಮೂನೆ–11ಎ ಗಳಾಗಿ ಪರಿವರ್ತನೆ ಮಾಡಿಕೊಳ್ಳಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ. ಹೊಸ ಬಹುಮಹಡಿ (ಅಪಾರ್ಟ್‌ಮೆಂಟ್) ಗಳಿಗೆ ಅರ್ಜಿಗಳನ್ನು ಸಲ್ಲಿಸಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ಕಲ್ಪಿಸಲಾಗಿದೆ. ಇ-ಸ್ವತ್ತು ತಂತ್ರಾಂಶದ ಸಿಟಿಜನ್‌ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಸಲ್ಲಿಸುವಲ್ಲಿ ಗುಂಟೆ ಮತ್ತು ಸೆಂಟ್ಸ್‌ನಲ್ಲಿರುವ ವಿಸ್ತೀರ್ಣವನ್ನು ಚ.ಮೀ ನಲ್ಲಿ ಪರಿವರ್ತಿಸಿ, ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದರು.

ಇ-ಸ್ವತ್ತು ತಂತ್ರಾಂಶದ ಸಿಟಿಜನ್‌ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಋಣಭಾರ ಪ್ರಮಾಣಪತ್ರ (ಇಸಿ)ಗಳನ್ನು ಸಲ್ಲಿಸಲು ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಸಿಟಿಜನ್‌ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಸೇವ್ ಮತ್ತು ಡೌನ್ಲೋಡ್ ಮಾಡಲು ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ತಿಳಿಸಿದರು.

ಇ-ಸ್ವತ್ತು ತಂತ್ರಾಂಶದ ಸಿಟಿಜನ್‌ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಸಲ್ಲಿಸುವಾಗ ಎಲ್ಲಾ ವಿದ್ಯುತ್ ಸರಬರಾಜು ಕಂಪನಿ ಗಳೊಂದಿಗೆ ಮಾಡಲಾಗಿದ್ದ ಸಂಯೋಜನೆಯಲ್ಲಿ ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಗ್ರಾಮ ಪಂಚಾಯತಿ ಬಳಕೆದಾರರುಗಳ ಲಾಗಿನ್‌ ನಲ್ಲಿ ಅರ್ಜಿಗಳ ಅನುಮೋದನೆಯಲ್ಲಿ ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳು ಸಹ ಬಗೆಹರಿದಿವೆ. ಹೊಸದಾಗಿ ಅನುಮೋದನೆಗೊಂಡ ಆಸ್ತಿಗಳಿಗೆ ತಿದ್ದುಪಡಿ ಮಾಡುವ ಅವಕಾಶವನ್ನು ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮಾರ್ಗಸೂಚಿ ದರವನ್ನು ಇ-ಸ್ವತ್ತು ತಂತ್ರಾಂಶದೊಂದಿಗೆ ಸಂಯೋಜನೆ ಮಾಡುವ ಕಾರ್ಯವನ್ನು ಮುಂದಿನ ದಿನಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು. ಇ-ಸ್ವತ್ತು ತಂತ್ರಾಂಶದ ಬಳಕೆದಾರರುಗಳ ಲಾಗಿನ್‌ ನಲ್ಲಿ ಉಂಟಾಗುತ್ತಿರುವ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲಾಗುವುದು ಎಂದು ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಕಾರ್ಯದರ್ಶಿ ರಣ್‌ದೀಪ್‌ ಭಾಗವಹಿಸಿದ್ದರು.

 

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon