114ನೇ ಜಯಂತಿಯಂದು ಸಾಲುಮರದ ತಿಮ್ಮಕ್ಕ ವೇದಿಕೆ ಉದ್ಘಾಟನೆ: ಹೆಚ್.ಮಾರಪ್ಪ  

WhatsApp
Telegram
Facebook
Twitter
LinkedIn

ಬೆಂಗಳೂರು: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ವೇದಿಕೆ ವತಿಯಿಂದ ಜೂನ್ 30ರಂದು ಯಲಹಂಕ ಉಪನಗರದಲ್ಲಿ ವೇದಿಕೆಯ ಉದ್ಘಾಟನಾ ಸಮಾರಂಭ ಹಾಗೂ ಪರಿಸರ ಹೋರಾಟಗಾರ್ತಿ ಸಾಲುಮರದ ತಿಮ್ಮಕ್ಕ ಅವರ 114ನೇ ಜನ್ಮದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದು ಸಂಸ್ಥೆಯ ರಾಜ್ಯಾಧ್ಯಕ್ಷ ಹೆಚ್.ಮಾರಪ್ಪ ತಿಳಿಸಿದರು.

ಈ ಕುರಿತು ಗುರುವಾರ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯಲಹಂಕ ಉಪನಗರದ ದಿ ನ್ಯೂಟೌನ್ ಕ್ಲಬ್ ಮುಂಭಾಗದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಬೆಳಿಗ್ಗೆ 10 ಗಂಟೆಗೆ ಗಿಡ ನೆಡುವ ಮೂಲಕ ಚಾಲನೆ ನೀಡಲಾಗುವುದು. ಮಧ್ಯಾಹ್ನ 3 ಗಂಟೆಗೆ ಮದರ್ ಡೈರಿ ಸರ್ಕಲ್‌ನಿಂದ ಸಾಲುಮರದ ತಿಮ್ಮಕ್ಕ ಅವರ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಈ ಮೆರವಣಿಗೆ 16ನೇ ಬಿ ಮುಖ್ಯರಸ್ತೆ, ಬಸ್ ನಿಲ್ದಾಣ ಹಾಗೂ ಚಿಕ್ಕಬೊಮ್ಮಸಂದ್ರ ಸರ್ಕಲ್ ಮಾರ್ಗವಾಗಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ವೃತ್ತದವರೆಗೆ ಸಾಗಲಿದೆ. ಸಂಜೆ 5 ಗಂಟೆಯಿಂದ ವೇದಿಕೆ ಕಾರ್ಯಕ್ರಮ ಆರಂಭವಾಗಲಿದ್ದು, ಸಂಜೆ 6 ರಿಂದ ರಾತ್ರಿ 9 ಗಂಟೆಯವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಆರ್ಕೆಸ್ಟ್ರಾ ನಡೆಯಲಿವೆ. ರಾಜ್ಯದ ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಉದ್ಘಾಟಿಸಲಿದ್ದಾರೆ. ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರು ವೇದಿಕೆಯ ನಾಮಫಲಕವನ್ನು ಅನಾವರಣಗೊಳಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ. ಸುಧಾಕರ್, ಚಲನಚಿತ್ರ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್, ಖ್ಯಾತ ವಿಚಾರವಾದಿ ಪ್ರೊ. ಕೆ.ಎಸ್. ಭಗವಾನ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಪಿ.ಎಸ್. ಕಾಂತರಾಜ್ ಹಾಗೂ ಬೆಂಗಳೂರು ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತ ಮಿತುನ್ ಕುಮಾರ್ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಗೌರವಾಧ್ಯಕ್ಷ ಎಂ.ಎಂ ಮುನಿರಾಜು, ಉಪಾಧ್ಯಕ್ಷರುಗಳಾದ ಜಗದೀಶ್ ಗೌಡ, ಪಿ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ರಮೇಶ್ ಆರ್ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon