ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಏ. 9ರಂದು ಮಧ್ಯಾಹ್ನ 3 ಗಂಟೆಗೆ ವೆಬ್ ಸೈಟ್‌ಗಳಲ್ಲಿ ಪ್ರಕಟವಾಗಲಿದೆ.
ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್ ಸೈಟ್ ನಲ್ಲಿ ಪಡೆಯಬಹುದಾಗಿದೆ. ಅಲ್ಲದೇ ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್, ಎಸ್‌ಎಂಎಸ್ ಮೂಲಕವೂ ಫಲಿತಾಂಶ ನೀಡಲಾಗುತ್ತದೆ. ಇದೇ ಮೊದಲ ಬಾರಿಗೆ ವಿಶೇಷವಾಗಿ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್ ಬಳಸಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಕಾಲೇಜುಗಳಿಗೆ ಮಧ್ಯಾಹ್ನ 3ರಂದು ಲಭ್ಯಗೊಳಿಸಲಾಗುವುದು. ಸಂಜೆ 6.15ಕ್ಕೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.














