ನೂತನ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಸ್ತಿತ್ವಕ್ಕೆ; ರಾಜ್ಯಾಧ್ಯಕ್ಷೆ ಸುಮತಿ.ಜಿ ಪದಗ್ರಹಣ

WhatsApp
Telegram
Facebook
Twitter
LinkedIn

ಬೆಂಗಳೂರು: ಜುಲೈ 12 (ಭಾನುವಾರ) ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪರ್ಯಾಯವಾಗಿ ನೂತನ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಹೊಸ ಸಂಘದ ಪದಾಧಿಕಾರಿಗಳನ್ನು ಸರ್ಕಾರಿ ನೌಕರರ ಭವನದಲ್ಲಿ ನಡೆದ ಸಭೆಯಲ್ಲಿ ಸರ್ವಾನುತದಿಂದ ಆಯ್ಕೆ ಮಾಡಲಾಗಿದೆ.

ನೂತನ ಅಧ್ಯಕ್ಷರಾಗಿ ಜಿ.ಸುಮತಿ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಸಲಗರ, ಗೌರವ ಅಧ್ಯಕ್ಷರಾಗಿ ಸುರೇಶ ಶೆಡಶ್ಯಾಳ ಕಾರ್ಯಾಧ್ಯಕ್ಷರಾಗಿ ಎಸ್ ಡಿ ರಂಗಣ್ಣನವರ್ ಮತ್ತು ದಿನಕರ್ ಶೆಟ್ಟಿ, ಖಜಾಂಚಿಯಾಗಿ ಆಸಿಪ್ ಅತ್ತರ್, ಉಪಾಧ್ಯಕ್ಷರುಗಳಾಗಿ ನಾಗನಗೌಡ ಹಾಗೂ ಎಂ.ಎ. ನೀಲಾ ಇಂಗಳಗಿ, ಸಹ ಕಾರ್ಯದರ್ಶಿಗಳಾಗಿ ಮಂಜುನಾಥ ಕೊಡಗು ಮತ್ತು ರಾಧಮ್ಮ, ಸಂಘಟನಾ ಕಾರ್ಯದರ್ಶಿಗಳಾಗಿ ಮಹದೇವ, ದ್ರಾಕ್ಷಾಯಿಣಿ, ಗೌರವ ಸಲಹೆಗಾರರಾಗಿ ಅರುಣ ಪ್ರತಾಪ ರೆಡ್ಡಿ, ಬಿ. ಟಿ. ಗೌಡರ ಆಯ್ಕೆಯಾದರು.

ಆಯ್ಕೆ ಪ್ರಕ್ರಿಯೆಯ ಬಳಿಕ ನಡೆದ ಕಾರ್ಯಕಾರಿ ಸಮಿತಿಯ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ನೂತನ ರಾಜ್ಯಾಧ್ಯಕ್ಷೆ ಸುಮತಿ ಜಿ, ಕರ್ನಾಟಕ ಶಾಲಾ ಶಿಕ್ಷಕರ ಅಧಿಕೃತ ಸಂಘ ನಮ್ಮದೇ ಆಗಿದೆ. ಇನ್ಯಾವುದೇ ಅಸ್ತಿತ್ವದಲ್ಲಿರುವ ಸಂಘಗಳು ಅನಧಿಕೃತವಾಗಿವೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನಬದ್ಧವಾಗಿ ಇಂದು ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದೆ. ಈ ಹಿನ್ನಲೆಯಲ್ಲಿ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಗಿದೆ. ಇನ್ನು 30 ದಿನಗಳಲ್ಲಿ ಎಲ್ಲಾ ಜಿಲ್ಲೆಗಳ ಹಾಗೂ ತಾಲೂಕುಗಳ ಸಂಘಗಳು ಅಸ್ತಿತ್ವಕ್ಕೆ ಬರಲಿವೆ ಎಂದರು.

ಶಿಕ್ಷಕರ ಜ್ವಲಂತ ಸಮಸ್ಯೆಗಳಿಗೆ ನಮ್ಮ ಸಂಘ ಕಿವಿಯಾಗಲಿದೆ. ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇಡಿ ಕಾರ್ಯಕಾರಿ ಸಮಿತಿ ಕಾರ್ಯನಿರ್ವಹಿಸಲಿದೆ. ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಾಗೂ ಶಿಕ್ಷಕರ ನಡುವಿನ ಕೊಂಡಿಯಾಗಿ ತನ್ನ ಕರ್ತವ್ಯವನ್ನು ನಿರ್ವಹಿಸಲಿದೆ. ನೂತನ ಸಂಗವು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರ ಮಾರ್ಗದರ್ಶನದಲ್ಲಿ ಮುಂದುವರೆಯಲಿದೆ ಎಂದು ತಿಳಿಸಿದರು.

ಸಂಘದ ಗೌರವಾಧ್ಯಕ್ಷ ಸುರೇಶ್ ಶಡಶ್ಯಾಳ ಮಾತನಾಡಿ, ಈಗ ಅಸ್ತಿತ್ವದಲ್ಲಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಯಾವುದೇ ಚುನಾವಣಾ ನಿಯಮಗಳನ್ನು ಪಾಲಿಸದೆ ಗೆಲುವನ್ನು ಘೋಷಿಸಿಕೊಂಡಿದ್ದಾರೆ. ಇದಕ್ಕೆ ರಾಜ್ಯದ ಎಲ್ಲಾ ಶಿಕ್ಷಕರು ಬೇಸರವನ್ನು ವ್ಯಕ್ತಪಡಿಸಿದ್ದರು. ಆದ್ದರಿಂದ ಹಿಂದೆ ಶಿಕ್ಷಕರು ಸಂಘದಲ್ಲಿ ಕಾರ್ಯನಿರ್ವಹಿಸಿದ್ದ ಪದಾಧಿಕಾರಿಗಳು ಸೇರಿದಂತೆ ಸಮಾನ ಮನಸ್ಕರು ಹೊಸ ಸಂಘವನ್ನು ಅಸ್ತಿತ್ವಕ್ಕೆ ತಂದಿದ್ದೇವೆ ಎಂದು ನುಡಿದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon