ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಮೂರು ಮಂದಿ ಅರ್ಹ ವಿದ್ಯಾವಂತ, ದಕ್ಷ ಶಾಸಕರಾದ ಮೂರು ಮಂದಿಗೆ ಸಚಿವ ಸ್ಥಾನ ನೀಡಬೇಕೆಂದು ರಾಜ್ಯ ಐಕ್ಯತಾ ಒಕ್ಕೂಟದ ರಾಜ್ಯಾಧ್ಯಕ್ಷ ಮುಜಾಹೀದ್ ಅಲಿ ಬಾಬಾ ಒತ್ತಾಯಿಸಿದರು.
ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ದಕ್ಷ ರಾಜಕಾರಣಿಯಾಗಿದ್ದು, ಲೋಕೋಪಯೋಗಿ ,ಗೃಹ ಖಾತೆಯಂತಹ ಖಾತೆಗಳನ್ನು ನೀಡಬೇಕು, ಇವರು ಎಲ್ಲ ಮುಸ್ಲಿಂ ಭಾಂದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲಿದ್ದಾರೆ. ಇನ್ನು ಶಿವಾಜಿ ನಗರದ ಶಾಸಕ ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಸಚಿವ ಸ್ಥಾನ ಪಡೆಯಲು ಅರ್ಹ ವಿದ್ಯಾವಂತ ಶಾಸಕರಾಗಿದ್ದು ಅವರಿಗೆ ಸಚಿವ ಸ್ಥಾನ ನೀಡಬೇಕು, ಈ ಮೂವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಈ ಹಿಂದೆ ಜಮೀರ್ ಅಹಮ್ಮದ್ ಖಾನ್ ಅವರು ಬಿಜೆಪಿಯ ಸಖ್ಯ ಹೊಂದಿದ್ದ ಶಾಫಿ ಸಾದಿ ಅವರ ಅಣತಿಯಂತೆ ಕಾರ್ಯನಿರ್ವಹಿಸಿ ಕೆಲ ಮುಸ್ಲಿಂ ಸಮುದಾಯದ ವಿರೋಧ ಕಟ್ಟಿಕೊಂಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇವರಿಂದ ವಕ್ಪ್ ಬೋರ್ಡ್ ನಲ್ಲಿ ನೇಮಕಗೊಂಡಿರುವ ಅಧ್ಯಕ್ಷರು ಸರಿಯಾದ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಉಸಿರುಕಟ್ಟುವ ವಾತಾವರಣ ನಿರ್ಮಾಣವಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರಿಯಾದ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.














