ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆಯನ್ನು 2026ರ ಆಗಸ್ಟ್ 31ರೊಳಗೆ ಪೂರ್ಣಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಗಡುವು ವಿಧಿಸಿದೆ.
ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ನೀಡಬೇಕೆಂಬ ರಾಜ್ಯ ಸರ್ಕಾರದ ಮನವಿಯನ್ನು ನ್ಯಾಯಪೀಠ ತಿರಸ್ಕರಿಸಿದ್ದು, ಇದುವೇ ಅಂತಿಮ ಅವಕಾಶ ಎಂದು ಖಡಕ್ ಸೂಚನೆ ನೀಡಿದೆ.
ಆದೇಶದ ಅನ್ವಯ ಈ ಹಿಂದೆ ಜೂನ್ 30ರೊಳಗೆ ಚುನಾವಣೆ ನಡೆಸಲು ನೀಡಿದ್ದ ಜನವರಿ 12ರ ಆದೇಶವನ್ನು ಮಾರ್ಪಡಿಸಲಾಗಿದೆ. ಇದೀಗ ಆಗಸ್ಟ್ 31 ಅನ್ನು ಅಂತಿಮ ಗಡುವಾಗಿ ನಿಗದಿಪಡಿಸಲಾಗಿದೆ.
ಮನವಿ ತಿರಸ್ಕೃತ:
ಮುಂಬರುವ ಜನಗಣತಿ, ಮಳೆಗಾಲದ ಸಿದ್ಧತೆಗಳು ಹಾಗೂ ಮತದಾರರ ವಿಶೇಷ ಪರಿಷ್ಕರಣೆ ಕಾರ್ಯಗಳು ಬಾಕಿ ಇರುವುದರಿಂದ ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ.














