ಮಾನವೀಯತೆ ಮೆರೆದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

WhatsApp
Telegram
Facebook
Twitter
LinkedIn

ಬೆಂಗಳೂರು: ಖಾಸಗಿ ಕಾರ್ಯಕ್ರಮದ ನಿಮಿತ್ತ ಭಾನುವಾರ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಸನಕ್ಕೆ ತೆರಳುತ್ತಿರುವಾಗ ಬೆಂಗಳೂರು- ಹಾಸನ ಹೆದ್ದಾರಿಯಲ್ಲಿ ಆಟೋ ಮತ್ತು ಕಾರು ನಡುವೆ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವಿಕ್ರಂ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಅರ್ಧ ಗಂಟೆಯಿಂದ ಯಾರು ಗಮನಿಸದೆ ರಸ್ತೆಯಲ್ಲಿಯೇ ಇದ್ದಿದ್ದನ್ನು ನೋಡಿ ಪೊಲೀಸ್ ವಾಹನದಲ್ಲಿ ಆದಿಚುಂಚನಗಿರಿ ಆಸ್ಪತ್ರೆಗೆ ಕಳುಹಿಸಿ, ಸೂಕ್ತ ಚಿಕಿತ್ಸೆ ನೀಡುವಂತೆ ಅಲ್ಲಿನ ವೈದ್ಯರಿಗೆ ದೂರವಾಣಿ ಕರೆ ಮಾಡಿ ತಕ್ಷಣ ಸ್ಪಂದಿಸುವಂತೆ ತಿಳಿಸಿದ್ದಾರೆ.

ತೀವ್ರ ಗಾಯಗೊಂಡಿದ್ದ ವಿಕ್ರಮ್ ನರಳಾಡುತ್ತಿದ್ದರು, ಇದೇ ಮಾರ್ಗವಾಗಿ ತೆರಳುತ್ತಿದ್ದ ನನ್ನ ಕಾರನ್ನು ನಿಲ್ಲಿಸಿ ಹೆದ್ದಾರಿ ಗಸ್ತು ಅವರಿಗೆ ದೂರವಾಣಿ ಕರೆಮಾಡಿದೆ, ಅವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು. ಜೊತೆಗೆ ಖುದ್ದು ವೈದ್ಯರಿಗೆ ಕರೆಮಾಡಿ ತಕ್ಷಣ ಸ್ಪಂದಿಸುವಂತೆ ತಿಳಿಸಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon