ಖೇಲೋ ಇಂಡಿಯಾ, ವೈಬ್ರೆಂಟ್ ಮಂಡ್ಯ ನಿನಾದ ಮೊಳಗಿಸಿದ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

WhatsApp
Telegram
Facebook
Twitter
LinkedIn

ಮಂಡ್ಯ: ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ಯಜನೆಯ ಅಡಿಯಲ್ಲಿ ಮಂಡ್ಯಕ್ಕೆ ಮಂಜೂರಾಗಿರುವ 14 ಕೋಟಿ ವೆಚ್ಚದ ಬಹುಪಯೋಗಿ ಒಳಾಂಗಣ ಕ್ರೀಡಾಂಗಣಕ್ಕೆ ಕೇಂದ್ರದ ಯುವಜನ ಸಬಲೀಕರಣ, ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಶನಿವಾರ ಭೂಮಿಪೂಜೆ ನೆರವೇರಿಸಿ ಅಡಿಗಲ್ಲು ಹಾಕಿದರು.

ಮಂಡ್ಯದ ವಿಸಿ ಫಾರಂನಲ್ಲಿರುವ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನೂತನ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೆಸಿದ ಸಚಿವರಿಬ್ಬರು, ‘ಖೇಲೋ ಇಂಡಿಯಾ! ವೈಬ್ರೆಂಟ್ ಮಂಡ್ಯ’ ನಿನಾದಕ್ಕೆ ಪೂರಕವಾಗಿ ಮಂಡ್ಯ ಜಿಲ್ಲೆಯಲ್ಲಿ ಕ್ರೀಡೆಯು ಉಜ್ವಲವಾಗಿ ಬೆಳೆದು ಹೆಚ್ಚು ಪ್ರಮಾಣದಲ್ಲಿ ಚಾಂಪಿಯನ್ ಗಳು ಹೊರಬರಲಿ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಿಬ್ಬರೂ ಭೂಮಿಪೂಜೆಯ ವಿಧಿ ವಿಧಾನಗಳಲ್ಲಿ ಪಾಲ್ಗೊಂಡರು. ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಮೇಲುಕೋಟೆ ವಿಧಾನಸಭೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಕೆ.ಆರ್. ಪೇಟೆ ಶಾಸಕ ಮಂಜುನಾಥ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಜಿಲ್ಲೆಯ ಉನ್ನತ ಅಧಿಕಾರಿಗಳು ಹಾಜರಿದ್ದರು.

ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಮನ್ಸುಖ್ ಮಾಂಡವೀಯ, ಖೇಲೋ ಇಂಡಿಯಾ ಯೋಜನೆಯು ಭಾರತದ ತಳಮಟ್ಟದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಲು ಮತ್ತು ಭಾರತವನ್ನು ಶ್ರೇಷ್ಠ ಕ್ರೀಡಾ ರಾಷ್ಟ್ರವಾಗಿ ರೂಪಿಸಲು ಕೇಂದ್ರ ಸರ್ಕಾರ ಜಾರಿಗೆ ತಂದ ರಾಷ್ಟ್ರೀಯ ಕಾರ್ಯಕ್ರಮವಾಗಿದೆ ಎಂದರು.

ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳು ಹಾಗೂ ಎನ್.ಡಿ. ಎ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರ ಪರಿಶ್ರಮದಿಂದ ಮಂಡ್ಯದಲ್ಲಿ ಈ ಸುಸಜ್ಜಿತ ಕ್ರೀಡಾಂಗಣ ಬರುತ್ತಿದೆ. ಮಂಡ್ಯ ನೆಲದಿಂದ ರಾಜ್ಯವಷ್ಟೇ ಅಲ್ಲ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಕ್ರೀಡಾಪಟುಗಳು ಬಂದಿದ್ದಾರೆ. ಆ ಪೈಕಿ ನಾನು ವಿಕಾಸಗೌಡ, ಕೆ.ಆರ್. ಶಿಲ್ಪಾ ಅವರನ್ನು ನೆನಪಿಸಿಕೊಳ್ಳಲು ಬಯಸುತ್ತೇನೆ.  ಇಂತಹ ಅನೇಕ ಕ್ರೀಡಾಪಟುಗಳು ಮಂಡ್ಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಮುಖ್ಯವಾಗಿ ಭಾರತದ ನಂಬರ್ ಒನ್ ವೀಲ್ ಚೇರ್ ಟೆನಿಸ್ ಆಟಗಾರ್ತಿ ಆಗಿರುವ ಶಿಲ್ಪಾ ಅವರು ಭಾರತದ ಕೀರ್ತಿಯನ್ನು ದೇಶ ವಿದೇಶಗಳಲ್ಲಿ ಬೆಳಗುತ್ತಿದ್ದಾರೆ. ಇಂತಹ ಅಸಂಖ್ಯಾತ ಪ್ರತಿಭೆಗಳು ಇಲ್ಲಿಂದ ಬರಬೇಕು ಎಂದು ಹಾರೈಸುತ್ತೇನೆ ಎಂದು ಹೇಳಿದರು.

ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಕಳೆದ ಹನ್ನೊಂದು ವರ್ಷಗಳಲ್ಲಿ ಕ್ರೀಡಾ ಪೂರಕ ವ್ಯವಸ್ಥೆ ಹೆಚ್ಚಿಸಲು ಗುರುತರವಾಗಿ ಕೆಲಸ ಮಾಡಿದೆ. ಕಳೆದ ಬಜೆಟ್ ನಲ್ಲಿ ಕ್ರೀಡಾ ಮೂಲಸೌಕರ್ಯ ವೃದ್ಧಿಗೆ 4,000 ಕೋಟಿ ಹಂಚಿಕೆ ಮಾಡಿದೆ. ಹತ್ತು ವರ್ಷಗಳ ಹಿಂದೆ ಈ ಉದ್ದೇಶಕ್ಕೆ ಕೇವಲ 1200 ಕೋಟಿ ಮಾತ್ರ ಕೊಡಲಾಗುತ್ತಿತ್ತು. ಅದರ ಪ್ರಮಾಣ ಈಗ ಮೂರೂವರೆ ಪಟ್ಟು ಹೆಚ್ಚಾಗಿದೆ ಎಂಬುದನ್ನು ಎಲ್ಲರೂ ಗಮನಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದ ನಾಥ ಮಹಾಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಡಿ.ಸಿ. ತಮ್ಮಣ್ಣ, ಶಾಸಕ ಮಂಜುನಾಥ, ಮಾಜಿ ಶಾಸಕ ಡಾ. ಕೆ.ಅನ್ನದಾನಿ, ವಿಧಾನ ಪರಿಷತ್ ಸದಸ್ಯ ವಿವೇಕಾನಂದ, ಮಂಡ್ಯ ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಮೇಶ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಬೃಹತ್ ಬೆಲ್ಲದ ಹಾಕಿ ಸ್ವಾಗತಿಸಿದ ಅಭಿಮಾನಿಗಳು:

ಒಳಾಂಗಣ ಕ್ರೀಡಾಂಗಣಕ್ಕೆ ಭೂಮಿಪೂಜೆ ನೆರವೇರಿಸಿದ ನಂತರ ಕೇಂದ್ರದ ಇಬ್ಬರೂ ಸಚಿವರನ್ನು ವೇದಿಕೆಯ ಕಾರ್ಯಕ್ರಮಕ್ಕೆ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಕರೆ ತರಲಾಯಿತು.ಈ ಸಂದರ್ಭದಲ್ಲಿ ವಿಸಿ ಫಾರಂ ಗೇಟ್ ನಲ್ಲಿ ಬೃಹತ್ ಬೆಲ್ಲದ ಹರವನ್ನು ಹಾರ ಬರಮಾಡಿಕೊಳ್ಳಲಾಯಿತು. ಇಷ್ಟೊಂದು ದೊಡ್ಡ ಪ್ರಮಾಣದ ಬೆಲ್ಲದ ಹಾರದ ಮೂಲಕ ಸಿಕ್ಕಿದ ಸ್ವಾಗತವನ್ನು ಕಂಡು ಮಾಂಡವೀಯ ಚಕಿತರಾದರು. ಮಂಡ್ಯದ ಬೆಲ್ಲದ ಶ್ರೇಷ್ಠತೆಯ ಬಗ್ಗೆ ಕುಮಾರಸ್ವಾಮಿ ಮಾಂಡವೀಯ ರಿಗೆ ವಿವರಣೆ ನೀಡಿದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon