ಬೆಂಗಳೂರು: ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ವರ್ಲ್ಡ್ ಸ್ಕೌಟ್ಸ್ ಸ್ಕ್ರಾಪ್ ಡೇ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಮುಖ್ಯ ಆಯುಕ್ತ, ಮಾಜಿ ಸಚಿವ ಪಿ.ಜಿ.ಆರ್.ಸಿಂದ್ಯಾ ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಯು.ಟಿ.ಖಾದರ್ ಮಾತನಾಡಿ, ಸ್ಕೌಟ್ಸ್ ಅಂಡ್ ಗೈಡ್ ನಿಂದ ಪಡೆದ ತರಬೇತಿ, ಶಿಸ್ತಿನಿಂದ ನಾನು ಈ ಮಟ್ಟಕ್ಕೆ ಬೆಳೆದು ಬರಲು ಸಾಧ್ಯವಾಗಿದೆ. ವಿದ್ಯಾರ್ಥಿಗಳಿಗೆ ಸ್ಕೌಟ್ ಅಂಡ್ ಗೈಡ್ ನಿಂದ ಕೊಡುವ ತರಬೇತಿ ಈ ದೇಶಕ್ಕೆ ಅವರು ಉತ್ತಮ ಕೊಡುಗೆ ನೀಡಲು ಸಾಧ್ಯವಾಗುತ್ತದೆ. ಯುವಕರು, ವಿದ್ಯಾರ್ಥಿಗಳು ಬಲಿಷ್ಠವಾದಾಗ ಮಾತ್ರ ದೇಶ ಬಲಿಷ್ಢವಾಗಲು ಸಾಧ್ಯ, ಈ ನಿಟ್ಟಿನಲ್ಲಿ ಈ ಸಂಸ್ಥೆ ಉತ್ತಮ ತರಬೇತಿ ನೀಡುತ್ತಿದೆ ಎಂದು ಹೇಳಿದರು.
ಪಿ.ಜಿ.ಆರ್ ಸಿಂಧ್ಯಾ ಮಾತನಾಡಿ, ಆರೋಗ್ಯ ಸಚಿವರಾದ ಯು .ಟಿ.ಖಾದರ್ ಅವರು ನಮ್ಮ ಸಂಸ್ಥೆಯನ್ನು ರಾಷ್ಟ್ರೀಯ ಮಟ್ಟದಲ್ಲಿ ಬೆಳಯಲು ತಮ್ಮದೇ ಆದ ಸಹಕಾರ ನೀಡುತ್ತಿದ್ದಾರೆ. ಇಂದು ಮಹತ್ವದ ದಿನವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ. ಸ್ಕ್ರಾಪ್ ಡೇ ದಿನದಂದು ನಮ್ಮ ಕಾರ್ಯಕ್ಕೆ ಎಲ್ಲರ ಸಹಕಾರ ಇರಲಿ ಎಂದು ಅನೇಕರನ್ನು ಆಹ್ವಾನಿಸಲಾಗಿದೆ ಎಂದು ಹೇಳಿದರು.
ಈ ವೇಳೆ ಗಿಡ ನೆಡುವ ಮೂಲಕ ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆ ಮುನ್ನಡೆಸುವ ಕುರಿತು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಕೆ. ಗಂಗಪ್ಪ ಗೌಡ, ಪ್ರಭಾಕರ್ ಭಟ್, ಹಿರಿಯ ನಿವೃತ್ತ ಐಎಎಸ್ ಅಧಿಕಾರಿ ಅಮರನಾರಾಯಣ, ಸಮಾಜ ಸೇವಕಿ ರುತ್ ಮನೋರಮಾ, ಪ್ರೊ. ರಾಧಾಕೃಷ್ಣ, ಚಲನಚಿತ್ರ ನಟ ಗಣೇಶ್ ರಾವ್ ಕೇಸರ್ ಕರ್, ಜೆಡಿಎಸ್ ನಗರ ಕಾರ್ಯಾಧ್ಯಕ್ಷ ತುಳಸೀರಾಮ್, ನಿವೃತ್ತ ಅಧಿಕಾರಿ ಸುಲ್ತಾನ ಬೇಗಂ, ಅಹಿಂದ ಸಂಸ್ಥೆಯ ಮೂರ್ತಿ ಮತ್ತಿತರರು ಭಾಗವಹಿಸಿದ್ದರು.















